ಕಾಬೂಲ್ : ಇಂದು ಬೆಳ್ಳಂಬೆಳಗ್ಗೆ ಅಫ್ಘಾನಿಸ್ತಾನ ಮತ್ತು ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ತಜಕಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ವರದಿಯಾಗಿದೆ.
ಬುಧವಾರ ಬೆಳಿಗ್ಗೆ 6: 10 ಕ್ಕೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು. ಈ ಭೂಕಂಪದ ಆಳವು ಭೂಮಿಯಿಂದ 13 ಕಿಲೋಮೀಟರ್ ದೂರದಲ್ಲಿತ್ತು.
ಬುಧವಾರ ಮುಂಜಾನೆ 2:52 ಕ್ಕೆ ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆಯನ್ನು 4.1 ರಷ್ಟು ಅಳೆಯಲಾಗಿದ್ದು, ಅದರ ಆಳವು 181 ಕಿಲೋಮೀಟರ್ ಕೆಳಗಿದೆ. ತಜಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.