News Karnataka Kannada
Saturday, April 27 2024
ವಿದೇಶ

ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲು

ತೈವಾನ್​ನ  ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ  7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
Photo Credit : NewsKarnataka

ಪಪುವಾ: ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ.

ಬರೋಬ್ಬರಿ 1000 ಮನೆಗಳು ನೆಲಸಮವಾಗಿರೋ ವರದಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ 5 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ತೀವ್ರ ಭೂಕಂಪಕ್ಕೆ ನಲುಗಿರೋ ಪಪುವಾ ನ್ಯೂ ಗಿನಿಯಾದಲ್ಲಿ ಪ್ರವಾಹದ ಪರಿಸ್ಥಿತಿ ಕೂಡ ಎದುರಾಗಿದೆ. ಸೆಪಿಕ್ ನದಿ ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿದೆ.

1,000 ಮನೆಗಳು ನೆಲಸಮ ಆಗಿರೋದ್ರಿಂದ ಪಪುವಾದ ಹಲವು ಪ್ರದೇಶ ಹಾನಿಗೊಳಗಾಗಿದೆ. 9 ಲಕ್ಷ ಜನರು ನಿರಾಶ್ರಿತರಾಗಿದ್ದು, ಹಲವು ನಗರ ಪ್ರದೇಶದ ಜನರು ಹೊರಗಡೆ ಬಂದು ವಾಸಿಸುತ್ತಿದ್ದಾರೆ.

ನೆಲಸಮವಾದ ಮನೆಗಳು ಹಾಗೂ ಪ್ರಕೃತಿ ವಿಕೋಪದ ಮಧ್ಯೆ ಜನರು ಜೀವ ಉಳಿಸಲು ಪರದಾಟ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು