ವಿದೇಶ

ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ವಿದೇಶಾಂಗ ಸಚಿವಾಲಯ

ನವದೆಹಲಿ: ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆ, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬುಧವಾರ ಸಲಹೆ ನೀಡಿದೆ. ಕೆನಡಾಕ್ಕೆ ಪ್ರಯಾಣ ಮಾಡಬೇಕು ಎಂದು ಆಲೋಚಿಸುತ್ತಿರುವವರು “ಅತ್ಯಂತ ಜಾಗರೂಕರಾಗಿರಿ” ಎಂದು ಸಲಹೆ ನೀಡಿದೆ.

ಕೆನಡಾದಲ್ಲಿ ಬೆಳೆಯುತ್ತಿರುವ ಭಾರತ ವಿರೋಧಿ ಚಟುವಟಿಕೆ, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರಗಳನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಎಲ್ಲಾ ಭಾರತೀಯರು ಮತ್ತು ಅಲ್ಲಿಗೆ ಪ್ರಯಾಣಿಸಲು ಯೋಚಿಸುತ್ತಿರುವವರು ಜಾಗರೂಕರಾಗಿರಲು ಕೋರಲಾಗಿದೆ. ಇತ್ತೀಚೆಗೆ ಭಾರತೀಯ ರಾಜತಾಂತ್ರಿಕರು ಮತ್ತು ಭಾರತ ವಿರೋಧಿ ಕಾರ್ಯಸೂಚಿಯನ್ನು ವಿರೋಧಿಸುವ ಭಾರತೀಯ ಸಮುದಾಯದ ವಿಭಾಗಗಳನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ ಎಂದು ಹೇಳಿದೆ.

ಕೆನಡಾದಲ್ಲಿ ಇಂತಹ ಘಟನೆಗಳನ್ನು ಕಂಡಿರುವ ಪ್ರದೇಶಗಳು ಮತ್ತು ಸಂಭಾವ್ಯ ಸ್ಥಳಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಕೆನಡಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಹೈಕಮಿಷನ್ ಅಥವಾ ಕಾನ್ಸುಲೇಟ್ ಜನರಲ್ ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವಂತೆ ವಿದೇಶಾಂಗ ಇಲಾಖೆ ಸೂಚಿಸಿದೆ. ಕೆನಡಾದಲ್ಲಿ ಕ್ಷೀಣಿಸುತ್ತಿರುವ ಭದ್ರತಾ ವಾತಾವರಣವನ್ನು ಗಮನಿಸಿದ್ದೇವೆ ವಿಶೇಷವಾಗಿ ಭಾರತೀಯ ವಿದ್ಯಾರ್ಥಿಗಳು ತೀವ್ರ ಜಾಗರೂಕರಾಗಿರಬೇಕು.

ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳು MADAD ಪೋರ್ಟಲ್, madad.gov.in ಮೂಲಕ ಒಟ್ಟಾವಾದಲ್ಲಿನ ಹೈ ಕಮಿಷನ್ ಆಫ್ ಇಂಡಿಯಾ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. “ಯಾವುದೇ ತುರ್ತು ಅಥವಾ ಅಹಿತಕರ ಘಟನೆಯ ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಹೈಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಗೆ ಇದರಿಂದ ನೆರವಾಗುತ್ತದೆ ಎಂದು ಹೇಳಿದೆ.

Umesha HS

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

13 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

36 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

52 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago