ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ.

ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ತನಿಖೆಗೆ ಆದೇಶಿಸಿದ್ದಾರೆ.