ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.