Categories: ವಿದೇಶ

ಪ್ರಧಾನಿ ಉದ್ಘಾಟಿಸಿದ ವಿಮಾನ ನಿಲ್ಧಾಣ ಟರ್ಮಿನಲ್ ಛಾವಣಿ ಸೀಲಿಂಗ್‌ ಐದೇ ದಿನದಲ್ಲಿ ಕುಸಿತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18ರಂದು ಉದ್ಘಾಟಿಸಿದ್ದ ಪೋರ್ಟ್ ಬ್ಲೇರ್‌ನಲ್ಲಿ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಛಾವಣಿಯ ಸೀಲಿಂಗ್‌ ಭಾಗಗಳು ಕುಸಿದಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ನೆಟಿಜನ್‌ ಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಅಲ್ಲದೆ ಸೋಶಿಯಾಲ್‌ ಮೀಡಿಯಾದಲ್ಲಿ ಛಾವಣಿ ಕುಸಿದಿರುವ ದೃಶ್ಯಗಳು ಹರಿದಾಡುತ್ತಿವೆ.
ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ, ಜನರಲ್ (ನಿವೃತ್ತ) ವಿಕೆ ಸಿಂಗ್ ಮತ್ತು ಹಲವಾರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಬಗ್ಗೆ ಕಾಂಗ್ರೆಸ್‌ ಮುಖಂಡ, ಕೇಂದ್ರ ಮಾಜಿ ಸಚಿವ ಜೈರಾಮ್‌ ರಮೇಶ್‌ ಟ್ವೀಟ್‌ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇವಲ ಪ್ರಚಾರಕ್ಕಾಗಿ, ಪಕ್ಷದ ಸೆನ್ಸೆಕ್ಸ್‌ ಹೆಚ್ಚಿಸುವ ಏಕಮಾತ್ರ ಉದ್ದೇಶದಿಂದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುತ್ತಾರೆ. ರೈಲುಗಳು, ಸೇತುವೆಗಳು, ಕಟ್ಟಡ, ರಸ್ತೆ, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅವರಿಗೆ ಕಿಂಚಿತ್‌ ಕಾಳಜಿ ಇಲ್ಲ. ಕಾಮಗಾರಿ ಪೂರ್ಣವಾಗಿದೆಯೇ ಎಂಬ ಬಗ್ಗೆಯೂ ಗಮನಹರಿಸುವುದಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಕಾರ್ಯ ಮಾಡುತ್ತಿದ್ದಾರೆ. ಎಂದು ಹೇಳಿದ್ದಾರೆ. ಅಲ್ಲದೆ ಕಟ್ಟಡದ ವಿಸ್ತೀರ್ಣದ ಸೀಲಿಂಗ್ ಬೀಳುವ ದೃಶ್ಯಗಳನ್ನು ಹಂಚಿಕೊಂಡಿರುವ ನೆಟಿಜನ್‌ ಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ವಿಮಾನ ನಿಲ್ದಾಣ ಟರ್ಮಿನಲ್‌ ಉದ್ಘಾಟನೆಗೆ ಮುನ್ನ ಟ್ವೀಟ್‌ ಮಾಡಿದ್ದ ಪ್ರಧಾನಿ ಮೋದಿ, “ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸುಲಭ ಪ್ರಯಾಣವನ್ನು ಖಚಿತಪಡಿಸುತ್ತದೆ. ಇದು ಪ್ರವಾಸೋದ್ಯಮಕ್ಕೆ ಉತ್ತೇಜನಕಾರಿಯಾಗಿದೆ.
ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಶೆಲ್‌ನ ಆಕಾರದಲ್ಲಿ ವಿನ್ಯಾಸಗೊಳಿಸಲಾಗಿದ್ದು, ದ್ವೀಪಗಳ ನೈಸರ್ಗಿಕ ಪರಿಸರವನ್ನು ಸುಂದರವಾಗಿ ಚಿತ್ರಿಸಲಾಗಿದೆ. ನೈಸರ್ಗಿಕ ಬೆಳಕಿನ ಮೂಲ ಹೊಂದಿದೆ ಎಂದು ತಿಳಿಸಿದ್ದರು. ₹ 707.73 ಕೋಟಿ ಅಂದಾಜು ವೆಚ್ಚದಲ್ಲಿ ಯೋಜನೆ ಕಾಮಗಾರಿ ನಡೆದಿದೆ ಎಂದು ತಿಳಿಸಿದ್ದರು.

Umesha HS

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

13 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

37 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

55 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago