ಪಾಕಿಸ್ತಾನ: ಎರಡು ಬುಡಕಟ್ಟು ಜನಾಂಗದವರ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 11 ಜನರು ಮೃತಪಟ್ಟ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ನಡೆದಿದೆ.
ಬುಡಕಟ್ಟು ಜನಾಂಗದವರ ನಡುವೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಂತರ ಕುರ್ರಂ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಘರ್ಷಣೆ ವೇಳೆ 11 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಆದರೆ, ಘರ್ಷಣೆಗೆ ಕಾರಣ ತಿಳಿದುಬಂದಿಲ್ಲ.
ಘಟನೆಯ ಹಿನ್ನೆಲೆಯಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಹನಗಳಿಗೆ ಹಾನಿಗೊಂಡಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

