ಮನಿಲಾ: ಫಿಲಿಫೈನ್ಸ್‌ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದೇಶಾದ್ಯಂತ ವಿಮಾನಗಳ ಹಾರಾಟ ಹಾಗೂ ಹಡಗು ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಸಾವಿರಾರು ಜನ ಪ್ರಯಾಣಿಕರು ಪರದಾಡುತ್ತಿದ್ದಾರೆ. ದೇಶದ ಯಾಗಿ ಇಲೋಕೋಸ್ ನಾರ್ಟೆ ಪ್ರಾಂತ್ಯದ ಪಾವೊಯ್ ನಗರ ಸೇರಿದಂತೆ ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಗಂಟೆಗೆ 75-125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರಿಂದಾಗಿ ಮಳೆ ಹೆಚ್ಚಾಗುವ ಆತಂಕ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ನವೋಟಾಸ್ ಬಂದರಿನ ಮನಿಲಾ ಕೊಲ್ಲಿಯಲ್ಲಿ ಲಂಗರು ಹಾಕಲಾಗಿದ್ದ ಕಮಿಲ್ಲಾ ಎಂಬ ತರಬೇತಿ ಹಡಗು ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಮತ್ತೊಂದು ಹಡಗಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದ ಹಡಗು ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.