Bengaluru 28°C

ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ ನಿಧನ

ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ (100) ನಿಧನರಾಗಿದ್ದಾರೆ. ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್‌ ಜಾರ್ಜಿಯಾದ ತಮ್ಮ ನಿವಾಸದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ವಾಷಿಂಗ್ಟನ್‌ : ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ (100) ನಿಧನರಾಗಿದ್ದಾರೆ. ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್‌ ಜಾರ್ಜಿಯಾದ ತಮ್ಮ ನಿವಾಸದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.


ಅಕ್ಟೋಬರ್ 1, 1924 ರಂದು ಜಾರ್ಜಿಯಾದಲ್ಲಿ ಜನಿಸಿದ್ದ ಜಿಮ್ಮಿ ಕಾರ್ಟರ್ 1976 ರಿಂದ 1980 ರವರೆಗೆ ಅಮೆರಿಕದ 39 ನೇ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇನ್ನು ಅಧ್ಯಕ್ಷರಾಗುವ ಮೊದಲು ಯುನೈಟೆಡ್ ಸ್ಟೇಟ್ಸ್ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದರು.


ಇದೀಗ ದೀರ್ಘವಾದಿ ಆರೋಗ್ಯ ಸಮಸ್ಯೆ ಹಾಗೂ ವಯೋ ಸಹಜ ಕಾಯಿಲೆಯಿಂದಾಗಿ ಜಾರ್ಜಿಯಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇನ್ನು ಮಾನವೀಯ ಕೆಲಸಕ್ಕಾಗಿ 2002 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದಿದ್ದ ಕಾರ್ಟರ್ ಇಸ್ರೇಲ್ ಮತ್ತು ಈಜಿಪ್ಟ್ ಮಧ್ಯಸ್ಥಿತಿಕೆ ನಡೆಸಿ ಶಾಂತಿ ಮಾತುಕತೆ ನಡೆಸಿದ ಕೀರ್ತಿಗೆ ಪಾತ್ರರಾಗಿದ್ದರು.


ವಿಶೇಷ ಅಂದರೆ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಕಾರ್ಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಇವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್‌ಪುರಿ ಎಂದು ಹೆಸರಿಡಲಾಗಿತ್ತು.


Nk Channel Final 21 09 2023