ಬೀಜಿಂಗ್: ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಚೀನಾದ ನಡೆದಿದೆ.
ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಸ್ಫೋಟ ಸಂಭವಿಸಿದೆ. ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ.
ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಿಳಿಸಿದ್ದಾರೆ.
ದುರಂತಗಳು ಸಂಭವಿಸದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿನ್‌ಪಿಂಗ್ ಸಲಹೆ ನೀಡಿದ್ದಾರೆ.

