ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ನೈಟ್ರೇಟ್ ಆಕ್ಸೈಡ್ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೋಹಾನ್ಸ್ಬರ್ಗ್ನ ಪೂರ್ವ ಭಾಗದಲ್ಲಿರುವ ಬೋಕ್ಸ್ಬರ್ಗ್ನ ಅನೌಪಚಾರಿಕ ವಸಾಹತು ಪ್ರದೇಶದಲ್ಲಿ ಬುಧವಾರ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.
ತುರ್ತು ಸೇವೆಗಳಿಗೆ ಸಂಬಂಧಿಸಿದ ಅಧಿಕಾರಿಯೊಬ್ಬರು, ಆರಂಭದಲ್ಲಿ ಅನಿಲ ಸ್ಫೋಟ ಎಂದು ಭಾವಿಸಲಾಗಿದ್ದ ವಿಷಯದ ಬಗ್ಗೆ ರಾತ್ರಿ 8 ಗಂಟೆ ಸುಮಾರಿಗೆ ಕರೆ ಬಂದಿದೆ, ಆದರೆ ನಂತರ ಇದು ಅನೌಪಚಾರಿಕ ವಸಾಹತು ಪ್ರದೇಶದ ಯಾರ್ಡ್ಗಳಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದೆ ಎಂದು ದೃಢಪಡಿಸಿದರು. ಅನಿಲ ಸೋರಿಕೆ ಶಂಕಿತ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರಬಹುದು ಎಂದು ದಕ್ಷಿಣ ಆಫ್ರಿಕಾದ ಮಾಧ್ಯಮಗಳು ವರದಿ ಮಾಡಿವೆ. ಘಟನೆಯಲ್ಲಿ 1 ವರ್ಷದ ಮಗು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಅನಿಲ ಸೋರಿಕೆಯಿಂದಾಗಿ ಮೃತದೇಹಗಳು ಪ್ರದೇಶದಾದ್ಯಂತ ಅಲ್ಲಲ್ಲಿ ಚದುರಿದ ಸ್ಥಿತಿಯಲ್ಲಿ ಕಾಣಸಿಕ್ಕಿವೆ ಎಂದು ಮೂಲಗಳು ವರದಿ ಮಾಡಿದೆ.