ಇಂಗ್ಲೆಂಡ್: 16 ವರ್ಷದ ಬಾಲಕಿ ಮುಟ್ಟಿನ ಹೊಟ್ಟೆ ನೋವಿನ ಮಾತ್ರೆಗಳನ್ನು ಸೇವಿಸಿದ ಬಳಿಕ ಸಾವನ್ನಪ್ಪಿದ್ದಾಳೆ. ಲೈಲಾ ಖಾನ್ ಮೃತ ಬಾಲಕಿಯಾಗಿದ್ದಾಳೆ. ಲೈಲಾ ಖಾನ್ ಮುಟ್ಟಿನ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ತನ್ನ ಸ್ನೇಹಿತರ ಸಲಹೆಯ ಮೇರೆಗೆ ಪ್ರತೀ ತಿಂಗಳು ನೋವು ನಿವಾರಕ ಮಾತ್ರೆ ಸೇವಿಸಿದ್ದಾಳೆ. ಇದರಿಂದ ಆಕೆಯ ಸಾವು ಸಂಭವಿಸಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ನವೆಂಬರ್ 25ರಂದು ಋತು ಸ್ರಾವ ಆದ ದಿನವೇ ಲೈಲಾ ಖಾನ್ ಹೊಟ್ಟೆ ನೋವು ನಿವಾರಣಾ ಮಾತ್ರೆ ಸೇವಿಸಿದ್ದಾಳೆ. ಹೊಟ್ಟೆ ನೋವು ನಿವಾರಕ ಮಾತ್ರೆಗಳಿಂದ ಸಾಮಾನ್ಯವಾಗಿ ಮೂರರಿಂದ ನಾಲ್ಕು ದಿನಗಳಲ್ಲಿ ಮಹಿಳೆಯರಲ್ಲಿ ನೋವು ಕಡಿಮೆಯಾಗುತ್ತದೆ. ಆದರೆ ಲೈಲಾಳಿಗೆ ಮಾತ್ರೆ ಸೇವನೆ ಬಳಿಕ ಬೇರೆ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಒಂದೆಡರು ದಿನ ಕಳೆಯುದರಲ್ಲಿ ಆಕೆಯ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ.
ಆಕೆಯ ಕುಟುಂಬಸ್ಥರ ಪ್ರಕಾರ ಲೈಲಾ ಅರ್ಧ ಗಂಟೆಗಳಿಗೊಮ್ಮೆ ವಾಂತಿ ಮಾಡಿಕೊಳ್ಳುತ್ತಿದ್ದಳಂತೆ. ಜೊತೆಗೆ ಈಕೆಯ ಮುಟ್ಟಿನ ನೋವು ಕೂಡ ಉಲ್ಬಣಗೊಂಡಿದೆ. ಕೊನೆಗೆ ಡಿಸೆಂಬರ್ 05ರ ವೇಳೆಗೆ ಲೈಲಾ ವಿಪರೀತ ವಾಂತಿ ಭೇದಿ ಆರಂಭವಾಗಿದ್ದು, ಜೊತೆಗೆ ತೀವ್ರ ತಲೆನೋವಿನಿಂದ ಈಕೆ ಬಳಲಿದ್ದಾಳೆ. ಕೊನೆಗೆ ಆಕೆಯಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಲೆ ನೋವಿನಿಂದ ಒದ್ದಾಡುತ್ತಿದ್ದ ಆಕೆಯನ್ನು ಮೊದಲು ಸಿಟಿ ಸ್ಕ್ಯಾನ್ಗೆ ಒಳಪಡಿಸಲಾಯಿತು. ಈ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ತಿಳಿದುಬಂದಿದೆ. ಕೂಡಲೇ ಆಕೆಯನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ, ಮೆದುಳು ನಿಷ್ಕ್ರಿಯಗೊಂಡು ಲೈಲಾ ಸಾವನ್ನಪ್ಪಿದ್ದಾಳೆ
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ