ನವದೆಹಲಿ: ಭಾರತದ ಆರ್ಥಿಕತೆ ವಿಶ್ವದಲ್ಲಿಯೇ ಅತಿವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆ ಎಂದು ಪ್ರಧಾನಿ ಆಗಾಗ್ಗೆ ಹೇಳುತ್ತಿದ್ದರು. ಅದಕ್ಕೆ ಪೂರಕವೆಂಬತೆ ಶುಭಸುದ್ದಿಯೊಂದು ಹೊರಬಂದಿದೆ. ಲೈವ್ ಜಿಡಿಪಿ ಅಂಕಿಅಂಶಗಳ ಪ್ರಕಾರ, ಭಾರತವು ಶನಿವಾರದಂದು ಮೈಲಿಗಲ್ಲನ್ನು ಸಾಧಿಸಿದೆ. ದೇಶದ ಆರ್ಥಿಕತೆಯು ಮೊದಲ ಬಾರಿಗೆ 4 ಟ್ರಿಲಿಯನ್ ಡಾಲರ್ಗಳನ್ನು ದಾಟಿದೆ ಎಂದು ಹೇಳಲಾಗುತ್ತಿದೆ. ಇದೀಗ ಭಾರತ ಅತಿದೊಡ್ಡ ಆರ್ಥಿಕತೆಯಲ್ಲಿ ವಿಶ್ವದ 5ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಜಂಪ್ ಆಗಿದೆ. ಅಮೆರಿಕ ಸದ್ಯ ವಿಶ್ವದ ಅತಿದೊಡ್ಡ ಆರ್ಥಿಕತೆ ಹೊಂದಿದೆ. ಸಮೀಪದಲ್ಲಿರುವ ಚೀನಾ ನಂತರದ ಸ್ಥಾನದಲ್ಲಿದೆ. ಜರ್ಮನಿ ಮತ್ತು ಜಪಾನ್ ದೇಶಗಳ ನಂತರದ ಸ್ಥಾನದಲ್ಲಿ ಭಾರತ ಇತ್ತು. ಇದೀಗ ಜರ್ಮನಿ ಮತ್ತು ಜಪಾನ್ನ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿದೆ. ಭಾರತವು ಜಪಾನ್ನ ಜಿಡಿಪಿಯನ್ನು ಹಿಂದಿಕ್ಕಿದೆ ಎನ್ನಲಾಗುತ್ತಿದೆ.
ಗುಡ್ ನ್ಯೂಸ್: 4 ಟ್ರಿಲಿಯನ್ ದಾಟಿದ ಭಾರತದ ಜಿಡಿಪಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.