ಹರಾರೆ: ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ. ಅಲ್ಲಿನ ಜನರ ಹಸಿವು ನೀಗಿಸಲು ಈ ನಿರ್ದಾರವನ್ನು ಕೈಗೊಳ್ಳಲಾಗಿದೆ.
1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದ
ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದಾರೆ ಎಂದೂ ಸಹ ವರದಿಯಾಗಿತ್ತು.
Ad