ಡೊಮಿನಿಕನ್ ರಿಪಬ್ಲಿಕ್ ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆರಿಬಿಯನ್ದಲ್ಲಿ ಅನೇಕ ಮನೆಗಳು ನೆಲಸಮಗೊಂಡಿದ್ದು, ಈ ಬಗ್ಗೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಅವರು ವರದಿಯನ್ನು ತರಿಸಿಕೊಂಡಿದ್ದಾರೆ. ಇಂತಹ ಘಟನೆ ನಮ್ಮ ದೇಶದ ಇತಿಹಾಸದಲ್ಲೇ ಮೊದಲು ಎಂದು ಹೇಳಿದ್ದಾರೆ. ಮಳೆ ಮುನ್ನಚ್ಚರಿಕೆ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದ್ದು, ಇನ್ನು ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ದೇಶಾದ್ಯಂತ ಸುಮಾರು 13,000 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 32 ಪ್ರಾಂತ್ಯಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ.