ನ್ಯೂಯಾರ್ಕ್: ಅಮೆರಿಕದಲ್ಲಿ ಭಾರಿ ಹಿಮಪಾತವಾಗಿದ್ದು 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅಮೆರಿಕದ ಈಶಾನ್ಯ ಭಾಗದಲ್ಲಿ ಮೇರಿಲ್ಯಾಂಡ್‌ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ತೀವ್ರವಾದ ಗಾಳಿ ಮತ್ತು ಹಿಮಪಾತದ ಪರಿಣಾಮ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವ್ಯಾಪಾರ-ವಹಿವಾಟಿಗೆ ಅಡ್ಡಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

ಸೋಮವಾರ ಅಮೆರಿಕದಲ್ಲಿ 5,600 ಕ್ಕೂ ಹೆಚ್ಚು ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ನಿಗದಿಯಾಗಿದ್ದ ಇನ್ನೂ 2,000 ವಿಮಾನಗಳನ್ನು ರದ್ದುಗೊಳಿಸಲಾಯಿತು. ಸುಮಾರು 2,500 ವಿಮಾನಗಳ ಹಾರಾಟದಲ್ಲಿ ವಿಳಂಬವಾಯಿತು.