News Karnataka Kannada
Monday, May 06 2024
ವಿದೇಶ

ಭಾರತೀಯರಿಗೆ ಮರಣ ದಂಡನೆ: ಕತಾರ್‌ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದ ಭಾರತ

India says it has appealed to Qatar over death penalty for Indians
Photo Credit : News Kannada

ನವದೆಹಲಿ: ಕಳೆದ ವರ್ಷ ಆಗಸ್ಟ್‌ನಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಗೆ ಮರಣದಂಡನೆ ವಿಧಿಸುವ ಕುರಿತು ಭಾರತವು ಕತಾರ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಅಲ್ ದಹ್ರಾ ಕಂಪನಿಯ ಎಂಟು ಭಾರತೀಯ ಉದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ತೀರ್ಪಿನ ಪ್ರತಿಯನ್ನು ಕಾನೂನು ತಜ್ಞರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದ ಕುರಿತು ಕತಾರ್‌ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಮುಂದಿನ ಹಂತಗಳ ಕುರಿತು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಕತಾರ್‌ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ನಾವು ಸಂತ್ರಸ್ತರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಬಾಗ್ಜಿ ಹೇಳಿದ್ದಾರೆ.

ಕಳೆದ ವರ್ಷ ಕತಾರ್‌ನಲ್ಲಿ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಬಂಧಿಸಿತ್ತು. ಬಳಿಕ ಈ ಸಂಬಂಧ ಸಲ್ಲಿಸಿದ್ದ ಹಲವಾರು ಜಾಮೀನು ಅರ್ಜಿಗಳನ್ನು ಹಲವು ಬಾರಿ ತಿರಸ್ಕರಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು