ಇರಾನ್: ಇಸ್ರೇಲಿ ಬೇಹುಗಾರಿಕಾ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಇರಾಕ್ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇರಾಕ್ನ ಕುರ್ದಿಸ್ತಾನ್ನಲ್ಲಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ನ ರೆವಲ್ಯೂಷನರಿ ಗಾರ್ಡ್ಸ್ ಹೇಳಿದೆ. ಇಸ್ರೇಲ್ನ ಬೇಹುಗಾರಿಕಾ ಸಂಸ್ಥೆ ಮೊಸಾದ್ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.
ಸಿರಿಯಾದ ಅಲೆಪ್ಪೊ ಗ್ರಾಮಾಂತರ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಮೆಡಿಟರೇನಿಯನ್ ಸಮುದ್ರದ ದಿಕ್ಕಿನಿಂದ 4 ಕ್ಷಿಪಣಿಗಳು ಬಂದಿತ್ತು ಎಂದು ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಮಾನಿಟರ್ ಹೇಳಿದೆ.
ಈ ಪ್ರದೇಶದಲ್ಲಿ ಇರಾನ್ ವಿರೋಧಿಗಳ ಬೇಹುಗಾರಿಕೆ ಕೇಂದ್ರಗಳು ಮತ್ತು ಪಡೆಗಳನ್ನು ನಾಶಮಾಡಲು ಇಂದು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.
ಇನ್ನು ಕ್ಷಿಪಣಿ ದಾಳಿಯಲ್ಲಿ ಉದ್ಯಮಿ ಕುರ್ದಿಶ್ ಉದ್ಯಮಿ ಪೆಶ್ರಾ ದಿಜಾಯಿ ಮತ್ತು ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇರಾನ್ ಈ ಹಿಂದೆ ಇರಾಕ್ನ ಉತ್ತರ ಕುರ್ದಿಸ್ತಾನ್ ಪ್ರದೇಶದಲ್ಲಿ ದಾಳಿ ನಡೆಸಿತ್ತು. ಕುರ್ದಿಸ್ತಾನ್ ಸೆಕ್ಯುರಿಟಿ ಕೌನ್ಸಿಲ್ ಆಫ್ ಇರಾಕ್ ಪ್ರಕಾರ, ಈ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ.