ಬೈರುತ್: ಇಸ್ರೇಲ್ ವಾಯು ಪಡೆ ಲೆಬನಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಉಗ್ರ ಸಂಘಟನೆ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಗೀಡಾಗಿದ್ದಾನೆ ಎಂದು ಇಸ್ರೇಲ್ ಸೇನೆ ಘೋಷಿಸಿದೆ.
ಲೆಬನಾನ್‍ನಲ್ಲಿರುವ ಹಿಬ್ಜುಲ್ಲಾ ಉಗ್ರರ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ವಾಯುಪಡೆ ದಾಳಿ ನಡೆಸಿತ್ತು. ಈ ವೇಳೆ ಹಿಜ್ಬುಲ್ಲಾಗೆ ಸೇರಿದ ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದವು. ಈ ದಾಳಿಯಲ್ಲಿ ನಸ್ರಲ್ಲಾ ಸಹ ಹತ್ಯೆಗೀಡಾಗಿದ್ದಾನೆ.
ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು `ಹಸನ್ ನಸ್ರಲ್ಲಾ ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿಕೊಂಡಿದೆ. ಇನ್ನೂ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಹೇಳಿಕೆ ಬಿಡುಗಡೆ ಮಾಡಿದ್ದು, ಯಾರಾದರೂ ಇಸ್ರೇಲ್ ನಾಗರಿಕರಿಗೆ ಬೆದರಿಕೆ ಹಾಕಿದರೆ ಅವರನ್ನು ಮಟ್ಟ ಹಾಕುವುದು ಹೇಗೆ ಎಂದು ನಮಗೆ ತಿಳಿದಿದೆ ಎಂದು ಎಚ್ಚರಿಸಿದ್ದಾರೆ.
Ad