ಗಾಜಾ: ದಕ್ಷಿಣ ಗಾಜಾ ನಗರದಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರವಾಗಿ ಮಾರ್ಪಡಿಸಿದ್ದ ಶಾಲೆಯೊಂದರ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ 13 ಮಕ್ಕಳು ಮತ್ತು 6 ಮಹಿಳೆಯರು ಸೇರಿದ್ದಾರೆ ಎಂದು ಹಮಾಸ್‍ನ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.
ಹಮಾಸ್ ಕಮಾಂಡ್ ಸೆಂಟರ್‌ನ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಈ ಹಿಂದೆ ಶಾಲೆಯಾಗಿದ್ದ ಹಮಾಸ್ ಕಮಾಂಡ್ ಸೆಂಟರ್ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ದುರುದ್ದೇಶದಿಂದ ಜನರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇಸ್ರೇಲ್ ಇದನ್ನು ಹಮಾಸ್ ನಿರಾಕರಿಸಿದೆ.
ಮಹಿಳೆಯರು ಮತ್ತು ಅವರ ಮಕ್ಕಳು ಶಾಲೆಯ ಆಟದ ಮೈದಾನದಲ್ಲಿ ಕುಳಿತಿದ್ದರು. ಚಿಕ್ಕ ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಎರಡು ರಾಕೆಟ್‍ಗಳ ದಾಲಿ ನಡೆಯಿಂದ ಹಲವರು ಮೃತಪಟ್ಟರು ಎಂದು ಒಬ್ಬ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಮತ್ತೋರ್ವ ಪ್ರತ್ಯಕ್ಷದರ್ಶಿ ಮಾತನಾಡಿ, ಗಾಯಗೊಂಡ ಒಬ್ಬ ವ್ಯಕ್ತಿಯನ್ನು ನಾನು ನೋಡಲಿಲ್ಲ, ಎಲ್ಲರೂ ಮಹಿಳೆಯರು ಮತ್ತು ಮಕ್ಕಳಾಗಿದ್ದರು. ಅದನ್ನು ಸಹಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ಅರಬ್ ದೇಶಗಳು ಸಂತೋಷಪಡಲಿ. ಅಮೆರಿಕ, ಪ್ರಾದೇಶಿಕ ನೆರೆಹೊರೆಯವರು ಇಸ್ರೇಲ್ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.