ಗಾಜಾ: ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ವಾಸವಾಗಿರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಹಮಾಸ್ ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದೆ ಎನ್ನಲಾಗಿದೆ. ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಫಜ್ರ್ ಪ್ರಾರ್ಥನೆಯನ್ನು ನಿರ್ವಹಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.