Categories: ವಿದೇಶ

ಇಸ್ರೇಲ್‌ ಬಿಕ್ಕಟ್ಟು: ಇರಾನ್‌ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್‌ ಚರ್ಚೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.

“ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ ಮತ್ತು ಅಂತರಾಷ್ಟ್ರೀಯ ಸಮುದಾಯದ ಕಳವಳಗಳ ಕುರಿತು ಚರ್ಚೆ ನಡೆಸಿದರು. ಇಂತಹ ಕಠಿಣ ಸಂದರ್ಭದಲ್ಲಿ ಮಾನವೀಯ ಬೆಂಬಲ ನೀಡುವ ಮತ್ತು ಈ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸದಂತೆ ತೆಡೆಯಲು ಪರಸ್ಪರ ಸಂಪರ್ಕದಲ್ಲಿರುವ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಜೈಶಂಕರ್‌ ಎಕ್ಸ್‌ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರ ಸಂಘಟನೆಯನ್ನು ಇರಾನ್ ಬೆಂಬಲಿಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇಸ್ರೇಲ್‌ ನ ಮೈತ್ರಿ ರಾಷ್ಟ್ರ ಭಾರತ ಇರಾನ್‌ನೊಂದಿಗೆ ಮಾತುಕತೆ ನಡೆಸಿರುವುದು ಮಹತ್ವ ಪಡೆದಿದೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago