ಟೆಲ್ ಅವಿವ್: ಜಾಲತಾಣಗಳಲ್ಲಿ ಹಮಾಸ್ ಉಗ್ರಗಾಮಿ ಗುಂಪನ್ನು ಬೆಂಬಲಿಸಿ ಪೋಸ್ಟ್ ಹಾಕಿದ ನಟಿ ಮತ್ತು ಸಾಮಾಜಿಕ ಕಾರ್ಯಕರ್ತೆ ಮೈಸಾ ಅಬ್ದ್ ಎಲ್ಹಾದಿಯನ್ನು ಇಸ್ರೇಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಮತ್ತು ಹಿಂಸಾಚಾರ ಬೆಂಬಲಿಸಿ ಅವರು ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ನಜರೆತ್ನಿಂದ ಎಲ್ಹಾಡಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರ್ಲಿನ್ ಗೋಡೆ ಕೆಡವಿದ ಪ್ರಕರಣವನ್ನು ಉಲ್ಲೇಖಿಸಿ ಆಕೆ ಪೋಸ್ಟ್ನಲ್ಲಿ ಹೀಗೆ ಹೇಳಿದ್ದರು. ಬರ್ಲಿನ್ ಗೋಡೆಯಂತೆ ಇಸ್ರೇಲ್ ಮತ್ತು ಗಾಜಾ ನಡುವಿನ ಗಡಿ ಮುರಿಯಬೇಕು ಎಂದು ಆಕೆ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಮಾಸ್ ಉಗ್ರಗಾಮಿ ಗುಂಪನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ನಟಿ ಸೆರೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.