ಗಾಜಾ: ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನ್ನ ಸಾವಿನ ಸಂಖ್ಯೆ 8,306 ಕ್ಕೆ ಏರಿದೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಬಲಿಪಶುಗಳಲ್ಲಿ 3,457 ಮಕ್ಕಳು ಮತ್ತು 2,136 ಮಹಿಳೆಯರು ಸೇರಿದ್ದಾರೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖೆದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಯಿಂದ 21,048 ಪ್ಯಾಲೆಸ್ತೀನಿಯರು ಗಾಯಗೊಂಡಿದ್ದಾರೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ನ ಬಾಂಬ್ ದಾಳಿಯಿಂದ 25 ಆಸ್ಪತ್ರೆಗಳ ಸೇವೆ ಸ್ಥಗಿತಗೊಂಡಿದೆ ಎಂದು ಖೆದ್ರಾ ಹೇಳಿದ್ದಾರೆ. ಗಾಯಗೊಂಡ ಪ್ಯಾಲೆಸ್ಟೀನಿಯಾದವರಿಗೆ ಅಗತ್ಯ ಚಿಕಿತ್ಸೆ ನೀಡಲು ರಕ್ತದ ಕೊರತೆಯಿದೆ ಎಂದು ಅವರು ತಿಳಿಸಿದ್ದಾರೆ.