News Karnataka Kannada
Thursday, May 02 2024
ವಿದೇಶ

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 80ಕ್ಕೂ ಅಧಿಕ ಮಂದಿ ಸಾವು

 Says Hamas
Photo Credit :

ಹಮಾಸ್: ಇಸ್ರೇಲ್ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.

ನಬ್ಲುಸ್ ನಗರದಲ್ಲಿರುವ ಬಲಾಟ ಶಿಬಿರದ ಮೇಲೆ ನಡೆದಿರುವ ದಾಳಿಯ ಬಗ್ಗೆ ಇಸ್ರೇಲ್ ಸೇನೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 1967ರ ಮಧ್ಯಪ್ರಾಚ್ಯ ಯುದ್ಧ ಸಂದರ್ಭ ವೆಸ್ಟ್​ ಬ್ಯಾಂಕ್ ಪ್ರದೇಶವನ್ನು ಇಸ್ರೇಲ್ ವಶಪಡಿಸಿಕೊಂಡಿದೆ. ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್​ನಲ್ಲಿ ಅಕ್ಟೋಬರ್ 7 ರಂದು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ.

ವಿಶ್ವಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಸಂಘರ್ಷ ಆರಂಭವಾದಾಗಿನಿಂದ ವೆಸ್ಟ್​ ಬ್ಯಾಂಕ್​ನಲ್ಲಿ 51 ಮಕ್ಕಳು ಸೇರಿದಂತೆ ಕನಿಷ್ಠ 186 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ಬಂಡುಕೋರರನ್ನು ಹತ್ತಿಕ್ಕುವವರೆಗೆ ಯುದ್ಧ ನಿಲ್ಲಿಸುವ ಮಾತಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ, ಯುದ್ಧವನ್ನು ಪ್ರಾರಂಭಿಸಿದವರು ನಾವಲ್ಲ, ಆದರೆ ಅಂತ್ಯವು ನಮ್ಮಿಂದಲೇ ಆಗಲಿದೆ ಎಂದು ಹೇಳಿದ್ದಾರೆ.

ಇತ್ತ ಅದೇ ಸಮಯದಲ್ಲಿ, ಹಮಾಸ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ಗೆ ಅಮೆರಿಕ ಸಹಾಯ ಮಾಡುವುದನ್ನು ಹಿಜ್ಬುಲ್ಲಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಿಜ್ಬುಲ್ಲಾ ಅಮೆರಿಕದ ನೌಕಾಪಡೆಯನ್ನು ಸ್ಫೋಟಿಸುವ ಬೆದರಿಕೆ ಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು