Bengaluru 22°C
Ad

ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

ಬೈರುತ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ ನಡೆಸಿದೆ. ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

Ad
Ad
Nk Channel Final 21 09 2023