ರೋಮ್: ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮೋದಿ ಚಾಕೋಲೇಟ್ ಕೊಡುವ ವೀಡಿಯೋವನ್ನು ಮೆಲೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದು, ಮೋದಿಯವರಿಗೆ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜಾರ್ಜಿಯಾ ಮೆಲೋನಿ ಅವರು, ವೆಲ್ಕಮ್ ಟು ರೋಮ್, ಮೈ ಫ್ರೆಂಡ್ ಎಂದು ಹೇಳಿದ್ದು, ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಈ ನಡುವೆ ಪ್ರಧಾನಿ ಮೋದಿಯವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ರೋಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೆಲೋನಿ ಜೊತೆ ಭೋಜನ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆಯಿತು. ಬಳಿಕ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿದೆವು. ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಇಂದು ನಡೆಯಲಿರುವ ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ. ಭಾರತ-ಇಟಲಿ ಸ್ನೇಹವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಚರ್ಚೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.

View this post on Instagram

A post shared by Giorgia Meloni (@giorgiameloni)