News Karnataka Kannada
Monday, April 29 2024
ವಿದೇಶ

ಮಹತ್ವದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ

Women's Reservation
Photo Credit : News Kannada

ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಕಾಯ್ದೆ)ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಮಸೂದೆ ಮೇಲಿನ ಚರ್ಚೆಯಲ್ಲಿ ಸುಮಾರು 60 ಮಂದಿ ಭಾಗವಹಿಸಿದ್ದರು. ಸುಮಾರು 8 ಗಂಟೆ ಸುದೀರ್ಘ ಚರ್ಚೆ ಬಳಿಕ ಮಸೂದೆ ಅಂಗೀಕಾರವಾಗಿದೆ. ಲೋಕಸಭೆ ಸದಸ್ಯರಿಂದ ಮತಪತ್ರಗಳ ಮೂಲಕ ಮತದಾನ ನಡೆಯಿತು. ಮಸೂದೆ ಪರ 3ನೇ 2 ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ. ಮಹಿಳೆ ಮೀಸಲಾತಿ ವಿಧೇಯಕದ ಪರ 454 ಮತಗಳು ಬಂದರೆ, ವಿರೋಧವಾಗಿ 2 ಮತಗಳು ಬಂದಿವೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂವಿಧಾನ (128 ನೇ ತಿದ್ದುಪಡಿ) ಮಸೂದೆ 2023 ಅನ್ನು ಮಂಡಿಸುವ ವೇಳೆ ಮಾತನಾಡಿ ಸಂಸತ್ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಬೆಂಬಲಿಸುವ ಔಪಚಾರಿಕ ನಿರ್ಣಯವನ್ನು ಅಂಗೀಕರಿಸಿದ ದೇಶದ ಮೊದಲ ರಾಜಕೀಯ ಪಕ್ಷ ಬಿಜೆಪಿಯಾಗಿದೆ ಎಂದು ಹೇಳಿದ್ದರು.
ನರೇಂದ್ರ ಮೋದಿಯವರು ಪ್ರಧಾನಿಯಾಗಿ ಆಯ್ಕೆಯಾದ ನಂತರ ಈ ದೇಶದಲ್ಲಿ ಸಾಮಾಜಿಕ-ಆರ್ಥಿಕ ಕಲ್ಯಾಣ ಯೋಜನೆಗಳು ಮತ್ತು ಮಹಿಳೆಯರ ಪ್ರಗತಿಗೆ ಉತ್ತೇಜನ ನೀಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು