News Karnataka Kannada
Saturday, May 04 2024
ವಿದೇಶ

ಲ್ಯಾಂಡಿಂಗ್ ಕಕ್ಷೆ ಪ್ರವೇಶಕ್ಕೆ ಲೂನಾ ಗಗನನೌಕೆ ವಿಫಲ

Luna spacecraft fails to enter landing orbit
Photo Credit : News Kannada

ಮಾಸ್ಕೊ: ರಷ್ಯಾದ ಲೂನಾ-25 ಗಗನ ನೌಕೆಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನು ಪ್ರವೇಶಿಸಲು ಸಾಧ್ಯವಾಗಿಲ್ಲ. ರೊಬೊಟಿಕ್ ಬಾಹ್ಯಾಕಾಶ ನೌಕೆಯು ಶನಿವಾರ ಕಕ್ಷೆಯನ್ನು ಪ್ರವೇಶಿಸಬೇಕಾಗಿತ್ತು, ಆದರೆ ತುರ್ತು ಪರಿಸ್ಥಿತಿಯಿಂದಾಗಿ ಈ ಯತ್ನ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

ತಂಡವು ಪರಿಸ್ಥಿತಿಯನ್ನು ವಿಶ್ಲೇಷಿಸುತ್ತಿದೆ ಎಂದು ಹೇಳಿದೆ. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಲೂನಾ ಗಗನನೌಕೆಗೆ ಸಮಯ ನಿರ್ಧರಿಸಲಾಗಿತ್ತು. ಆದರೆ ಯೋಜನೆಯನ್ನು ಸ್ಥಗಿತ ಮಾಡಲಾಗಿದೆಯೇ ಅಥವಾ ತಾಂತ್ರಿಕ ದೋಷ ಸರಿಪಡಿಸುವ ಕಾರ್ಯ ನಡೆಯುತ್ತಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಲ್ಯಾಂಡಿಂಗ್‌ ಚೀನಾ ಸೇರಿದಂತೆ ಹೆಚ್ಚಿನ ರಾಷ್ಟ್ರಗಳ ಗುರಿಯಾಗಿದೆ. ಅದೇ ರೀತಿ ಭಾರತದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಸುತ್ತ ಸುತ್ತುತ್ತಿದೆ ಮತ್ತು ಈ ಬುಧವಾರ ದಕ್ಷಿಣಧ್ರುವದ ಬಳಿ ಇಳಿಯಲು ಪ್ರಯತ್ನಿಸುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು