ಆಸ್ಟ್ರೇಲಿಯಾ: ನಾಯಿಗಳ ಮೇಲೆ ಅತ್ಯಾಚಾರವೆಸಗಿ ಅವುಗಳನ್ನು ಕೊಲ್ಲುತ್ತಿದ್ದ ವ್ಯಕ್ತಿಗೆ ನ್ಯಾಯಾಲಯವು 249 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನಿಂದಾಗಿ ಆತ ಬದುಕಿರುವವರೆಗೂ ಜೈಲಿನಲ್ಲೇ ಕೊಳೆಯಬೇಕಾಗುತ್ತದೆ. ಈ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ ಆಡಮ್ ಬ್ರಿಟನ್ ಎಂಬಾತ ಹತ್ತಾರು ನಾಯಿಗಳ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಪ್ರಾಣಿಶಾಸ್ತ್ರಜ್ಞ ಎಂಬುದು ವಿಪರ್ಯಾಸ. ಆದರೆ ಆತ ಪ್ರಾಣಿಗಿಂತಲೂ ಕ್ರೂರವಾಗಿ ನಡೆದುಕೊಂಡಿದ್ದಾನೆ.
ಆತ 60ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ, ಆಸ್ಟ್ರೇಲಿಯಾದ ಡಾರ್ವಿನ್ನಲ್ಲಿರುವ ಮನೆಯಲ್ಲಿ ಈ ಕೃತ್ಯವೆಸಗಿದ್ದಾನೆ. ಆಡಮ್ ವಿರುದ್ಧ ನಡೆಯುತ್ತಿರುವ ಪ್ರಕರಣದ ಅಂತಿಮ ವಿಚಾರಣೆಯು ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಅಂದು ಶಿಕ್ಷೆ ಅಧಿಕೃತವಾಗಿ ಪ್ರಕಟವಾಗಲಿದೆ

