ಅಮೆರಿಕ : ಅಮೆರಿಕದ ಉತಾಹ್​ನ ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.

ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವೆಸ್ಟ್ ವ್ಯಾಲಿ ಸಿಟಿ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ. ಘಟನೆಯಲ್ಲಿ ಒಟ್ಟು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.

ಘಟನೆಗೆ ನಿರ್ದಿಷ್ಟ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗಾಯಗೊಂಡ ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಚುರುಕುಗೊಳಿಸಲಾಗಿದೆ.