ನ್ಯೂಯಾರ್ಕ್ : ರೋಚೆಸ್ಟರ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಓರ್ವ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಭಾನುವಾರ ಸಂಜೆ ರೋಚೆಸ್ಟರ್‌ನ ಮ್ಯಾಪಲ್‌ವುಡ್ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
20 ವರ್ಷದನ ಯುವಕ ಗುಂಡಿನ ದಾಳಿಗೆ ಬಲಿಯಾಗಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಇದು ಸಂಜೆ 6:20 ರ ಸುಮಾರಿಗೆ ಸಂಭವಿಸಿದೆ ಎಂದು ರೋಚೆಸ್ಟರ್ ಪೋಲೀಸ್ ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತರ ಸಂಖ್ಯೆ ಅಥವಾ ಮೃತರದ ಬಗ್ಗೆ ಪೊಲೀಸರು ಇನ್ನೂ ವಿವರಗಳನ್ನು ಬಿಡುಗಡೆ ಮಾಡಿಲ್ಲ

