ಪನಾಮ: ನಗರದ ಸುಪ್ರಸಿದ್ಧ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಸಮೀಪವಿರುವ ಬಾಲ್ಬೋವಾ ಟ್ಯಾಂಕ್ ಸೌಲಭ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಆರಂಭದಲ್ಲಿ ಒಂದು ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಬೆಂಕಿ ಕ್ಷಣಾರ್ಧದಲ್ಲಿ ಪಕ್ಕದ ಎರಡು ಬೃಹತ್ ಶೇಖರಣಾ ಘಟಕಗಳಿಗೆ ಹರಡಿದೆ.
ಈ ಭೀಕರ ಸ್ಫೋಟದ ದೃಶ್ಯವು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಕ್ಯಾಮೆರಾದಲ್ಲಿ ಲೈವ್ ಆಗಿ ಸೆರೆಯಾಗಿದೆ. ಘಟನೆಯಲ್ಲಿ ಹಲವಾರು ಕಾರ್ಮಿಕರು ಮತ್ತು ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಡೀ ಪ್ರದೇಶವನ್ನು ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

