ದಕ್ಷಿಣ ಕೊರಿಯಾ: ಡೇಜಿಯಾನ್‌ನ ಮುನ್‌ಪ್ಯೋಂಗ್-ಡಾಂಗ್‌ನಲ್ಲಿರುವ ಕಾರು ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಈ ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 59 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಅವಶೇಷಗಳ ಅಡಿಯಲ್ಲಿ ಶವಗಳನ್ನು ಪತ್ತೆಹಚ್ಚಲಾಗಿದ್ದು, ಇನ್ನೂ ಅನೇಕರು ನಾಪತ್ತೆಯಾಗಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ.

ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

View this post on Instagram

A post shared by News Karnataka (@newskarnataka)