Bengaluru 28°C
Ad

ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿ!

Guinea

ಪೋರ್ಟ್ ಮೊರೆಸ್ಬಿ: ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂದು ಇಲ್ಲಿನ ಸರ್ಕಾರ ವಿಶ್ವಸಂಸ್ಥೆಗೆ ತಿಳಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು ಭಾನುವಾರ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ಸುಮಾರು 670 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿತ್ತು. ಆದ್ರೆ ಸೋಮವಾರ ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂಬ ಅಂಶವನ್ನು ಉಲ್ಲೇಖಿಸಿದೆ.

ಅಲ್ಲದೇ ಕಟ್ಟಡಗಳು ನಾಶವಾಗಿವೆ, ಆಹಾರ ಬೆಳೆಗಳು ನಾಶವಾಗಿದ್ದು ದೇಶದ ಆರ್ಥಿಕತೆಯ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಯೊಬ್ಬರು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

 

 

Ad
Ad
Nk Channel Final 21 09 2023
Ad