ಇಸ್ತಾಂಬುಲ್: ಟರ್ಕಿ ಸಂಸತ್ನಲ್ಲಿ ಇಸ್ರೇಲ್ ದಾಳಿ ಖಂಡಿಸಿ ಭಾಷಣ ಮಾಡುತ್ತಿದ್ದ ಸಂಸದ ಹಸನ್ ಬಿಟ್ಮೆಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಸನ್ ಬಿಟ್ಮೆಜ್ ಅವರು ಸದನದಲ್ಲಿ ಇಸ್ರೇಲ್ ಮತ್ತು ಗಾಜಾ ಬಗ್ಗೆ ಮಾತನಾಡುತ್ತಿದ್ದರು. ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅವರು, ದೇವರು (ಅಲ್ಲಾ) ಇಸ್ರೇಲ್ನನ್ನು ಕ್ಷಮಿಸುವುದಿಲ್ಲ ಎಂದು ಹೇಳಿ ಕುಸಿದು ಬಿದ್ದರು. ಕೂಡಲೇ ಅವರನ್ನು ಭದ್ರತಾ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರಾದರೂ ಆ ವೇಳೆಗೆ ಮೃತಪಟ್ಟಿದ್ದರು. ನಂತರ ಹಸನ್ ಬಿಟ್ಮೆಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.