Categories: ವಿದೇಶ

ನೇಪಾಳ ಅನ್ನಪೂರ್ಣ ಪರ್ವತ ಏರ ಹೊರಟಿದ್ದ ಪರ್ವತಾರೋಹಿ ನಾಪತ್ತೆ

ಕಠ್ಮಂಡು: ನೇಪಾಳದ ಅನ್ನಪೂರ್ಣ ಪರ್ವತದ ಕ್ಯಾಂಪ್ III ರ ಕೆಳಗೆ ಭಾರತೀಯ ಪರ್ವತಾರೋಹಿಯೊಬ್ಬರು ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ಖಚಿತಪಡಿಸಿದ್ದಾರೆ.

ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಹಿಮಾಲಯನ್ ಟೈಮ್ಸ್‌ಗೆ ಈ ವಿಷಯ ತಿಳಿಸಿದ್ದು, ರಾಜಸ್ಥಾನದ ಕಿಶನ್‌ಗರ್ಗ್‌ನ ಅನುರಾಗ್ ಮಾಲೂ,( 34,) ಕ್ಯಾಂಪ್ III ನಿಂದ ಇಳಿಯುವಾಗ ಸುಮಾರು 6,000 ಮೀಟರ್‌ನಿಂದ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅನುರಾಗ್ ಮಾಲೂ ಕಳೆದ ವರ್ಷವಷ್ಟೇ ಮೌಂಟ್ ಅಮಾ ದಬ್ಲಾಮ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಋತುವಿನಲ್ಲಿ ಮೌಂಟ್ ಎವರೆಸ್ಟ್, ಅನ್ನಪೂರ್ಣ ಮತ್ತು ಲೊಟ್ಸೆಯನ್ನು ಏರಲು ಯೋಜಿಸಿದ್ದರು.

ಮಾಲೂ ಅವರಿಗೆ ಈ ಹಿಂದೆ ಕರಮ್‌ವೀರ್ ಚಕ್ರವನ್ನು ನೀಡಲಾಗಿತ್ತು. ಅವರು ಪರ್ವತಗಳನ್ನು ಏರಲು ಪ್ರಸಿದ್ಧ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ ಪಡೆದಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

Gayathri SG

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

5 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

11 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

22 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

33 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

43 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

49 mins ago