News Karnataka Kannada
Monday, April 29 2024
ವಿದೇಶ

ದೆಹಲಿ: ಗೋಧಿಯನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಯಾವುದೇ ಚಿಂತನೆ ಮಾಡಿಲ್ಲ ಎಂದ ಆಹಾರ ಇಲಾಖೆ

Wheat
Photo Credit : IANS

ಕೇಂದ್ರ ಸರ್ಕಾರ ಗೋಧಿಯನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಯಾವುದೇ ಚಿಂತನೆ ಮಾಡಿಲ್ಲ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (Department of Food & Public Distribution) ಸ್ಪಷ್ಟಪಡಿಸಿದೆ.

ದೇಶೀಯ ಅಗತ್ಯತೆಗಳನ್ನು ಪೂರೈಸಲು ಭಾರತೀಯ ಆಹಾರ ನಿಗಮವು, ಸಾರ್ವಜನಿಕ ವಿತರಣೆಗೆ ಸಾಕಷ್ಟು ದಾಸ್ತಾನುಗಳನ್ನು ಹೊಂದಿದೆ ಎಂದು ಹೇಳಿದೆ.

ಈ ಸಂಬಂಧ ಟ್ವೀಟ್​ ಮಾಡಿದ ಆಹಾರ ಇಲಾಖೆ “ಭಾರತಕ್ಕೆ ಗೋಧಿಯನ್ನು ಆಮದು ಮಾಡಿಕೊಳ್ಳಲು ಅಂತಹ ಯಾವುದೇ ಯೋಜನೆ ಇಲ್ಲ. ದೇಶದಲ್ಲಿ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ದಾಸ್ತಾನುಗಳನ್ನು ಹೊಂದಿದೆ ಎಂದು ಟ್ವೀಟ್​ ಮಾಡಿದೆ.”

ಭಾರತವು ವಿಶ್ವದ ಎರಡನೇ ಅತಿದೊಡ್ಡ ಧಾನ್ಯ ಉತ್ಪಾದಕ ದೇಶವಾಗಿದ್ದು, 2022 ರಲ್ಲಿ 106.84 ಮಿಲಿಯನ್ ಟನ್ ಗೋಧಿಯನ್ನು ಉತ್ಪಾದನೆ ಮಾಡಿತ್ತು. ಇದು ಹಿಂದಿನ ಅಂದಾಜಿನ 106.41 ಮಿಲಿಯನ್ ಟನ್‌ಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು