ಅಮೆರಿಕ: ಅಮೆರಿಕದ ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
11 ಮಂದಿಯಲ್ಲಿ ನಾಲ್ವರು ಮಕ್ಕಳು, ಒಂದು ವರ್ಷದ ಬಾಲಕ ಮತ್ತು ಎಂಟು ವರ್ಷದ ಬಾಲಕನಿಗೆ ಹಲವು ಬಾರಿ ಗುಂಡು ತಗುಲಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಒಂಬತ್ತು ವರ್ಷದ ಮತ್ತೊಬ್ಬ ಬಾಲಕ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.
ಕೈ ಮತ್ತು ಬೆನ್ನಿಗೆ ಗುಂಡು ತಗುಲಿದ 36 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಗುಂಡು ಹಾರಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.