ಅಫ್ಗಾನಿಸ್ತಾನ: ಪಾಕಿಸ್ತಾನವು ಗಡಿಯಲ್ಲಿ ಮತ್ತೆ ದಾಳಿ ಆರಂಭವಾಗಿದ್ದು, ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ರಾತ್ರಿ ಪಾಕಿಸ್ತಾನದ ಸೈನ್ಯವು ಮತ್ತೆ ನಮ್ಮ ವಾಯುಗಡಿಯನ್ನು ಉಲ್ಲಂಘಿಸಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಾಗರಿಕ ಕಟ್ಟಡಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ 11 ಮಕ್ಕಳು ಹಾಗೂ ಒಬ್ಬ ಮಹಿಳೆ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.
ಪಾಕಿಸ್ತಾನದ ಗಡಿ ಭಾಗದಲ್ಲಿರುವ ಖೋಸ್ಟ್ ಪ್ರಾಂತ್ಯವೊಂದರಲ್ಲೇ 9 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಕುನಾರ್, ಪಕ್ತಿಕಾ ಪ್ರಾಂತ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ಪಾಕಿಸ್ತಾನ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

