ಪಾಕಿಸ್ತಾನ ಸರ್ಕಾರವು ಇದೀಗ, ಸಾಮಾಜಿಕ ಮಾಧ್ಯಮಗಳಾದ ಯೂಟ್ಯೂಬ್, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಹಾಗೂ ಟಿಕ್ಟಾಕ್ ನಿಷೇಧಕ್ಕೆ ಮುಂದಾಗಿದೆ. ಜುಲೈ 13ರಿಂದ 18ರವರೆಗೆ ಆರು ದಿನಗಳ ಕಾಲ ಇವುಗಳಿಗೆ ನಿಷೇಧ ಹೇರಲಾಗಿದೆ.
ಮೊಹರಂ ತಿಂಗಳಿನಲ್ಲಿ ದ್ವೇಷಪೂರಿತ ಭಾಷಣವಾಗಲಿ, ತಪ್ಪು ಮಾಹಿತಿಯಾಗಲಿ ರವಾನೆಯಾಗದಂತೆ ನೋಡಿಕೊಳ್ಳಲು ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಈ ಕ್ರಮ ಕೈಗೊಂಡಿದ್ದಾರೆ.
ಪಾಕಿಸ್ತಾನ ಸರ್ಕಾರವು ಇದಕ್ಕಾಗಿ ಸಂಪೂರ್ಣವಾಗಿ ಸಿದ್ಧವಾಗಿದೆ. ಮರ್ಯಮ್ ನವಾಜ್ ಅವರ ಕಾನೂನು ಮತ್ತು ಸುವ್ಯವಸ್ಥೆಯ ಸಂಪುಟ ಸಮಿತಿಯು ಈ ಪ್ರಸ್ತಾಪವನ್ನು ಮಂಡಿಸಿದೆ. ಈ ಮೂಲಕ ಸಂಸ್ಕೃತಿಯ ಬಗ್ಗೆ ದ್ವೇಷ ಹರಡುವುದನ್ನು ಮತ್ತು ಯಾವುದೇ ಅಪಪ್ರಚಾರವನ್ನು ಪ್ರಚಾರ ಮಾಡುವುದನ್ನು ಹೆಚ್ಚಿನ ಪ್ರಮಾಣದಲ್ಲಿ ನಿಲ್ಲಿಸಬಹುದು ಎಂಬುದು ಅವರ ಅಭಿಪ್ರಾಯವಾಗಿದೆ.ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮರ್ಯಮ್ ನವಾಜ್ ಅವರು ದೇಶದ ಪ್ರಧಾನಿ ಬಳಿ ಮನವಿ ಮಾಡಿದ್ದಾರೆ.

