News Karnataka Kannada
Friday, May 03 2024
ವಿದೇಶ

ಪಾಕ್‌ ನಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ ದಿಟ್ಟ ಹಿಂದೂ ಮಹಿಳೆ

Pak Election
Photo Credit : News Kannada

ಪಾಕಿಸ್ತಾನದಲ್ಲಿ ಮುಂದಿನ ವರ್ಷ 2024 ರಲ್ಲಿ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಖೈಬರ್ ಪಖ್ತುಂಖ್ವಾದ ಬುನೇರ್ ಜಿಲ್ಲೆಯ ಸಾಮಾನ್ಯ ಸ್ಥಾನಕ್ಕೆ ಹಿಂದೂ ಮಹಿಳೆಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ.

ಡಾನ್ ವರದಿಯ ಪ್ರಕಾರ, ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ ಬುನರ್ ಜಿಲ್ಲೆಯ PK-25 ರ ಸಾಮಾನ್ಯ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಿಂದೂ ಸಮುದಾಯದ ಸದಸ್ಯರಾದ ಸವೇರಾ ಪ್ರಕಾಶ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಸವೀರಾ ಪ್ರಕಾಶ್ ತಂದೆಯ ಹೆಸರು ಓಂಪ್ರಕಾಶ್. ಅವರು ಈ ಹಿಂದೆ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸದಸ್ಯರಾಗಿದ್ದರು.

ಸೋಮವಾರ (ಡಿಸೆಂಬರ್ 25) ಕ್ವಾಮಿ ವತನ್ ಪಾರ್ಟಿಯೊಂದಿಗೆ ಸಂಬಂಧ ಹೊಂದಿರುವ ಖೈಬರ್ ಪಖ್ತುಂಕ್ವಾದ ಸ್ಥಳೀಯ ನಾಯಕ ಸಲೀಂ ಖಾನ್. ಮುಂಬರುವ ಚುನಾವಣೆಗೆ ಬಣೇರ್‌ನಿಂದ ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮೊದಲ ಮಹಿಳೆ ಸವೀರಾ ಪ್ರಕಾಶ್‌ ಎಂದು ಹೇಳಿದರು. ಸವೇರಾ ಪ್ರಕಾಶ್ ಅವರು 2022 ರಲ್ಲಿ ಅಬೋಟಾಬಾದ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಅವರು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

ಸವೀರಾ ಪ್ರಕಾಶ್ ಅವರು ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುವಾಗ ಸಮುದಾಯದ ಕಲ್ಯಾಣಕ್ಕಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ. ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು