News Karnataka Kannada
Wednesday, May 15 2024
ವಿದೇಶ

ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಗೆ ಅರ್ಜಿ

Petition to the Supreme Court to stay the order to drain water to Tamil Nadu
Photo Credit : News Kannada

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ತಮಿಳುನಾಡಿಗೆ ನೀರು ಪೂರೈಕೆ ಮಾಡುವಂತೆ ಆದೇಶಿಸಿರುವುದು ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಸಮಾಲೋಚನೆ ನಡೆಸಿದ್ದರು. ಇದೀಗ ಸುಪ್ರೀಂಕೋರ್ಟ್‌ ಗೆ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು ಅದೇಶಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು