ಜಾರ್ಜಿಯಾ: ಗೈನೆಸ್ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ಬಳಿಕ ಎಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

