News Karnataka Kannada
Monday, April 29 2024
ವಿದೇಶ

ಇಂದು ಪಿಎಂ ಮೋದಿಯಿಂದ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

airport
Photo Credit :

ಪೋರ್ಟ್ ಬ್ಲೇರ್: ಇಂದು ಪ್ರಧಾನಿ ಮೋದಿ ಪೋರ್ಟ್ ಬ್ಲೇರ್‌ನ ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಒಟ್ಟಾರೆ 710ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಟರ್ಮಿನಲ್ ನಿರ್ಮಾಣವಾಗಿದ್ದು, ಈ ನಿಲ್ದಾಣದಿಂದ ಅಂಡಮಾನ್ ಹಾಗೂ ನಿಕೋಬಾರ್ ಸಂಪರ್ಕ ಇನ್ನಷ್ಟು ಹೆಚ್ಚಾಗಲಿದೆ.

ಈ ವಿಮಾನ ನಿಲ್ದಾಣ ದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಸಂಪರ್ಕವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಟ್ಟು ಸುಮಾರು 40,800 ಚದರ ಮೀಟರ್‌ನ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್‌ಬಸ್-321 ಮಾದರಿಯ ವಿಮಾನಗಳಿಗೆ ಸೂಕ್ತವಾದ ಅಪ್ರಾನ್ ಸಹ ನಿರ್ಮಿಸಲಾಗಿದೆ. ಇದರಿಂದಾಗಿ ಪ್ರಸ್ತುತ ಏಕಕಾಲದಲ್ಲಿ ಹತ್ತು ವಿಮಾನಗಳ ನಿಲುಗಡೆಗೆ ವಿಮಾನ ನಿಲ್ದಾಣವು ಸಿದ್ಧವಾಗಿದೆ.

ಅಂಡಮಾನ್ ಮತ್ತು ನಿಕೋಬಾರ್‌ನ ಪ್ರಾಚೀನ ದ್ವೀಪಗಳಿಗೆ ದ್ವಾರದಂತೆ, ಪೋರ್ಟ್ ಬ್ಲೇರ್ ಪ್ರವಾಸಿಗರಿಗೆ ಜನಪ್ರಿಯ ತಾಣವಾಗಿದೆ. ಇದು ಸ್ಥಳೀಯರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಪುಷ್ಟಿ ನೀಡುವುದರ ಜೊತೆಗೆ ಪ್ರದೇಶದ ಆರ್ಥಿಕತೆಯನ್ನು ವೃದ್ಧಿಸಲು ಸಹಾಯ ಮಾಡುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು