ನವದೆಹಲಿ: ಬಿಜೆಪಿ ಪಕ್ಷಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟು ಬಿಜೆಪಿಯ ಭೀಷ್ಮ ಎಂದೆ ಪರಿಗಣಿಸಲ್ಪಟ್ಟ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ನಿವಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಬುಧವಾರ ಭೇಟಿ ನೀಡಿ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಮಾಜಿ ಅಧ್ಯಕ್ಷ ಎಲ್. ಕೆ. ಅಡ್ವಾಣಿ ಇಂದು 96ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಡ್ವಾಣಿ ಜಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದೆ” ಎಂದು ಪ್ರಧಾನಿ ಮೋದಿ ಅಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಹಿರಿಯ ಮುಖಂಡನಿಗೆ ಶುಭ ಕೋರಿದ ಚಿತ್ರ ಸಹ ಹಂಚಿಕೊಂಡಿದ್ದಾರೆ. ಮತ್ತೊಂದು ಪೋಸ್ಟ್ನಲ್ಲಿ, ಅಡ್ವಾಣಿ ಅವರು “ನಮ್ಮ ರಾಷ್ಟ್ರವನ್ನು ಬಲಪಡಿಸುವ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಯ ದಾರಿದೀಪ” ಎಂದು ಬಣ್ಣಿಸಿದ್ದಾರೆ.