News Karnataka Kannada
Saturday, April 20 2024
Cricket
ವಿದೇಶ

ಈಜಿಪ್ಟ್‌ನಲ್ಲಿ 1,000 ವರ್ಷ ಹಳೆಯ ಮಸೀದಿಗೆ ಪ್ರಧಾನಿ ಮೋದಿ ಭೇಟಿ

pm modi mosque in cairo
Photo Credit : News Kannada

ಕೈರೋ: ಅಮೆರಿಕದಿಂದ ನೇರವಾಗಿ ಈಜಿಪ್ಟ್‌ಗೆ 2 ದಿನ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ಮೋದಿ ಅವರು ಇಂದು (ಜೂನ್.25) ಸಾವಿರ ವರ್ಷ ಹಳೆಯದಾದ ಅಲ್‌-ಹಕೀಮ್‌ ಮಸೀದಿಗೆ ಭೇಟಿ ನೀಡಿದರು.

ಭಾರತದ ದಾವೂದಿ ಬೊಹ್ರಾ ಸಮುದಾಯದ ಸಹಾಯದಿಂದ ಪುನಃಸ್ಥಾಪಿಸಲಾದ ಕೈರೋದಲ್ಲಿನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದರು. 1012 ರಲ್ಲಿ ನಿರ್ಮಿಸಲಾದ ಮಸೀದಿಯ ಗೋಡೆಗಳು ಮತ್ತು ದ್ವಾರಗಳ ಮೇಲಿನ ಕೆತ್ತನೆ ನೋಡಿ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದರು.

ಈ ಮಸೀದಿ ಸಾವಿರ ವರ್ಷಗಳಷ್ಟು ಹಳೆಯದಾದ ಅಲ್-ಹಕೀಮ್ ಕೈರೋದಲ್ಲಿನ 4ನೇ ಅತ್ಯಂತ ಹಳೆಯ ಮಸೀದಿಯಾಗಿದೆ. ನಗರದಲ್ಲಿ ನಿರ್ಮಿಸಲಾದ ಎರಡನೇ ಫಾತಿಮಿಡ್ ಮಸೀದಿಯಾಗಿದೆ. ಮಸೀದಿಯು 13,560 ಚದರ ಮೀಟರ್‌ಗಳಷ್ಟು ವಿಸ್ತೀರ್ಣ ಹೊಂದಿದೆ. ಸಾಂಪ್ರದಾಯಿಕ ಕೇಂದ್ರ ಪ್ರಾಂಗಣವು 5,000 ಚದರ ಮೀಟರ್‌ ವೀಸ್ತೀರ್ಣವಿದೆ. ಮಸೀದಿ ಭೇಟಿ ಬಳಿಕ ಮೋದಿ ಅವರು, ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧಸ್ಮಾರಕಕ್ಕೆ ಭೇಟಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು