ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಪಿಎಂ ಹುದ್ದೆಗೆ ರಾಜೀನಾಮೆ ನೀಡಿ, ಢಾಕಾವನ್ನು ತೊರೆದು ಸುರಕ್ಷಿತ ಸ್ಥಳಕ್ಕಾಗಿ ತೆರಳಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಸೇನಾ ಮುಖ್ಯಸ್ಥರು ಸಂಜೆ 4: 30 ರ ಸುಮಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆಗೆ ಒತ್ತಾಯಿಸಿ ಇಂದು (ಆಗಸ್ಟ್ 5) ಉಲ್ಬಣಗೊಳ್ಳುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಢಾಕಾವನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ಅರಮನೆಗೆ ಮುತ್ತಿಗೆ ಹಾಕಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Ad