ದುಬೈ: ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಅಭಿಯಾನವನ್ನು ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ. ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ಮಾರಕ ಕಾಯಿಲೆಯು ವ್ಯಾಪಕವಾಗಿದೆ.
ಸೆಪ್ಟೆಂಬರ್‌ನಲ್ಲಿ ಲಸಿಕೆ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆದರೆ ಲಸಿಕೆ ಕಾರ್ಯಕ್ರಮವನ್ನು ಸ್ಥಳಿತಗೊಳಿಸಿರುವುದಕ್ಕೆ ಯಾವುದೇ ಕಾರಣ ತಿಳಿಸಿಲ್ಲ. ಈ ಬಗ್ಗೆ ತಾಲಿಬಾನ್ ಸರ್ಕಾರದ ಯಾರೊಬ್ಬರೂ ಪ್ರತಿಕ್ರಿಯೆಗೂ ಲಭ್ಯವಾಗಿಲ್ಲ. ಅಫ್ಗಾನಿಸ್ತಾನದಲ್ಲಿ ಈ ವರ್ಷ 18 ಪೋಲಿಯೊ ಪ್ರಕರಣಗಳು ದೃಢಪಟ್ಟಿವೆ. 2023ರಲ್ಲಿ ಆರಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
Ad