News Karnataka Kannada
Saturday, April 13 2024
Cricket
ವಿದೇಶ

ಈಜಿಪ್ಟ್ ಜೊತೆ ಹಲವು ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ

PM modi
Photo Credit : Twitter

ಕೈರೋ: ಪ್ರಧಾನಿ ಮೋದಿ ಅಮೆರಿಕ ಪ್ರವಾಸದ ನಂತರ ಮತ್ತೊಂದು ಮಹತ್ವದ ಪ್ರವಾಸ ಕೈಗೊಂಡಿದ್ದಾರೆ.  ಈ ಭೇಟಿ ಬಳಿಕ ಈಜಿಪ್ಟ್‌ ಅಧ್ಯಕ್ಷ ಅಬ್ದುಲ್‌ ಫತ್ತಾಹ್‌ ಅಲ್‌ ಆಹ್ವಾನದ ಹಿನ್ನೆಲೆಯಲ್ಲಿ ಪಿಎಂ ಮೋದಿ ಈಜಿಪ್ಟ್‌ಗೆ ತೆರಳಿದ್ದಾರೆ.

ಭಾರತ, ಈಜಿಪ್ಟ್‌ ಸಂಬಂಧ ಮೊದಲಿನಿಂದ ಉತ್ತಮವಾಗಿದೆ. ಅಲ್ಲದೆ ಎರಡೂ ದೇಶದ ಮಧ್ಯೆ ಸಾವಿರಾರು ವರ್ಷದಿಂದ ವ್ಯಾಪಾರ ಹಾಗೂ ವಹಿವಾಟು ನಡೆಯುತ್ತಿದೆ. ಅದರಲ್ಲೂ ಆಧುನಿಕ ಕಾಲಘಟ್ಟದಲ್ಲಿ ಎರಡೂ ದೇಶಗಳ ವ್ಯಾವಹಾರಿಕ ಸಂಬಂಧ ಉತ್ತಮವಾಗಿದೆ. ಇದೇ ಕಾರಣಕ್ಕೆ ಬಂಡವಾಳ ಹೂಡಿಕೆ, ನವೀಕರಿಸಬಹುದಾದ ಇಂಧನ ಮತ್ತು ಐಟಿ, ಡಿಜಿಟಲ್ ಪಾವತಿಯು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಎರಡೂ ದೇಶಗಳ ನಾಯಕರು ಸಹಿ ಹಾಕಿದರು. ಈ ಮೂಲಕ ಪ್ರಧಾನಿ ಮೋದಿ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಅಮೆರಿಕದ ಬಳಿಕ ಮತ್ತೊಂದು ದೇಶದ ಜೊತೆಗೂ ಭಾರತದ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ.

ಈ ವೇಳೆ ಮೊದಲನೇ ಮಹಾಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ 4,000 ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಲು, ಕೈರೋದ ಎಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧ ಸ್ಮಾರಕಕ್ಕೆ ಕೂಡ ಪ್ರಧಾನಿ ಮೋದಿ ತೆರಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು